ಸುಬ್ರಹ್ಮಣ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮವು ನ. 16 ರಂದು ಅವರ ಅಭಿಮಾನಿಗಳು ಮತ್ತು ಹಿತೈಷಿಗಳ ವತಿಯಿಂದ ಪಂಜದಲ್ಲಿ ನಡೆಯಲಿದೆ. ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ನ. 16ರಂದು ಸಂಜೆ 4 ಗಂಟೆಗೆ ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಲಿದ್ದು, ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. ಸಂಜೆ 5.40ಕ್ಕೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸ್ಥಾಪಕಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭ ಉದ್ಘಾಟಿಸಲಿದ್ದಾರೆ. ಜಾಕೆ ಮಾಧವ ಗೌಡರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸನ್ಮಾನಿಸಲಿದ್ದು, ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಜಾಕೆಯವರ ಕುರಿತು ನಿರ್ಮಿಸಲಾದ ಸಾಕ್ಷ್ಯಚಿತ್ರವನ್ನು ಶಾಸಕ ಎಸ್.ಅಂಗಾರ ಚಿಡುಗಡೆ ಮಾಡಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಜಾಕೆ ಮಾಧವ ಗೌಡರು ಹಿರಿಯ ಮುತ್ಸದ್ಧಿಯಾಗಿ ರಾಜಕೀಯ, ಸಾಮಾಜಿಕ, ಸಹಕಾರ, ಸಾಹಿತ್ಯ ಸಂಘಟನೆ ಸೇರಿದಂತೆ ಸಮಾಜಕ್ಕೆ ನಾನಾ ರೀತಿಯಲ್ಲಿ, ನಾನಾ ಕ್ಷೇತ್ರಗಳಲ್ಲಿ ಕೊಡುಗೆ ನೀಡಿ ಮಾದರಿಯಾಗಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ, ಸುಳ್ಯ ಎಪಿಎಂಸಿ ಅಧ್ಯಕ್ಷರಾಗಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಆಳ್ವಾಸ್ ನುಡಿಸಿರಿ ಘಟಕದ ಅಧ್ಯಕ್ಷರಾಗಿ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಕಲ್ಮಡ್ಕ ಹಾಗೂ ಪಂಬೆತ್ತಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಅವರು ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಅಭಿನಂದಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.
ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಹೆಜ್ಜೆನಾದ ತಂಡದಿಂದ ಜ್ಞಾನ ಐತಾಳ್ ನಿರ್ದೇಶನದಲ್ಲಿ ನೃತ್ಯ ವೈಭವ ನಡೆಯಲಿದೆ. ಬಳಿಕ ಸಹಭೋಜನ ನಡೆಯಲಿದೆ.
ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಜಾಕೆ ಮಾಧವ ಗೌಡರ ಅಭಿಮಾನಿಗಳು ಹಾಗೂ ಹಿತೈಷಿಗಳು ಭಾಗವಹಿಸಬೇಕೆಂದು ಅವರು ವಿನಂತಿಸಿದರು. ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ ಉಪಸ್ಥಿತರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…