ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅರವಿಂದ್ ಬೊಬ್ಡೆ ನೇಮಕವಾಗಿದ್ದು, ನವೆಂಬರ್ 18 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಸ್ಟೀಸ್ ರಂಜನ್ ಗೊಗಾಯ್ ಅವರು ಜಸ್ಟೀಸ್ ಅರವಿಂದ್ ಬೊಬ್ಡೆ ಅವರ ಹೆಸರನ್ನು ಉನ್ನತ ಹುದ್ದೆಗೆ ಶಿಫಾರಸು ಮಾಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.
ನ.17ರಂದು ಹಾಲಿ ಸಿಜೆಐ ರಂಜನ್ ಗೊಗಾಯ್ ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ 47 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿದ್ದ ಜಸ್ಟೀಸ್ ಬೊಬ್ಡೆ ಅವರು 2021 ಏ.23ರಂದು ನಿವೃತ್ತಿಯಾಗಲಿರುವರು.
ಶರದ್ ಅರವಿಂದ್ ಬೊಬ್ಡೆ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏ.24, 1956ರಂದು ಜನಿಸಿದ ಬೊಬ್ಡೆ ಅವರು ನಾಗ್ಪುರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವರು. ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ. 2000ರ ಮಾ. 29ರಂದು ಬಾಂಬೆ ಹೈಕೋರ್ಟಿನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾದರು. 2013ರ ಏಪ್ರಿಲ್ ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.
ಅಯೋಧ್ಯಾ ಪ್ರಕರಣ, ಬಿಸಿಸಿಐ ಕೇಸ್, ಪಟಾಕಿ ನಿಷೇಧ ಪ್ರಕರಣ ಮುಂತಾದ ಪ್ರಕರಣಗಳನ್ನು ಬೊಬ್ಡೆ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…