ಸುಳ್ಯ: ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ನ.18ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗವುದು. ಬಳಿಕ ನಡೆಯಲಿರುವ ಪುನಶ್ಚೇತನ ಕಾರ್ಯಗಾರದಲ್ಲಿ ಮಾಧ್ಯಮ ಮತ್ತು ಭವಿಷ್ಯದ ಸವಾಲು ವಿಷಯದಲ್ಲಿ ಹಿರಿಯ ಪತ್ರಕರ್ತ ಬಿ.ವಿ. ಮಲ್ಲಿಕಾರ್ಜುನಯ್ಯ ಮತ್ತು ಮಾಧ್ಯಮ ಮತ್ತು ಮೌಲ್ಯಗಳು ಎಂಬ ವಿಷಯದ ಬಗ್ಗೆ ಉಜಿರೆ ಎಸ್ ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ. ಭಾಸ್ಕರ ಹೆಗಡೆ ವಿಶೇಷ ಉಪನ್ಯಾಸ ನೀಡಲಿರುವರು. ಬಳಿಕ ಸಂವಾದ ನಡೆಯಲಿದೆ. ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ
ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ತಿಳಿಸಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.