Advertisement
ಕಾರ್ಯಕ್ರಮಗಳು

ನ.18: ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಪತ್ರಕರ್ತರಿಗೆ ಪುನಶ್ಚೇತನ ಕಾರ್ಯಾಗಾರ

Share

ಸುಳ್ಯ: ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ನ.18ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗವುದು. ಬಳಿಕ ನಡೆಯಲಿರುವ ಪುನಶ್ಚೇತನ ಕಾರ್ಯಗಾರದಲ್ಲಿ ಮಾಧ್ಯಮ ಮತ್ತು ಭವಿಷ್ಯದ ಸವಾಲು ವಿಷಯದಲ್ಲಿ ಹಿರಿಯ ಪತ್ರಕರ್ತ ಬಿ.ವಿ. ಮಲ್ಲಿಕಾರ್ಜುನಯ್ಯ ಮತ್ತು ಮಾಧ್ಯಮ ಮತ್ತು ಮೌಲ್ಯಗಳು ಎಂಬ ವಿಷಯದ ಬಗ್ಗೆ ಉಜಿರೆ ಎಸ್ ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ. ಭಾಸ್ಕರ ಹೆಗಡೆ ವಿಶೇಷ ಉಪನ್ಯಾಸ ನೀಡಲಿರುವರು. ಬಳಿಕ ಸಂವಾದ ನಡೆಯಲಿದೆ. ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಎಂದು ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ
ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

2 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

4 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

4 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

5 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

18 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 day ago