ನ.2-ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ

October 24, 2019
6:16 PM

ಸುಳ್ಯ :ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮ ನ.2 ರಂದು ನಡೆಯಲಿದೆ ಎಂದು ವಿವೇಕಾನಂದ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಸುಧಾಕರ ಕಾಮತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಿನ ಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ‌.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಭಾಗವಹಿಸಲಿದ್ದಾರೆ‌. ಸಂಜೆ ಏಳರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ನೂತನ ಸಭಾಭವನ ‘ರಜತ ಕಿರಣ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕುಟುಂಬ ಪ್ರಬೋಧನ್ ಅಖಿಲ ಭಾರತ ಸಂಯೋಜಕರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಸಮಾರೋಪ ಸಂದೇಶ ನೀಡುವರು. ಎಂ.ಆರ್.ಪಿ.ಎಲ್ ನ ಮುಖ್ಯ ವ್ಯವಸ್ಥಾಪಕ(ಪ್ರೋಜಕ್ಟ್) ಶ್ರೀರಂಗ, ಸುಳ್ಯದ ಉದ್ಯಮಿ ಕೆ.ಕೃಷ್ಣ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Advertisement
Advertisement
Advertisement
Advertisement

ಬಳಿಕ ಸಾಂಸ್ಕೃತಿಕ ವೈಭವ ನಡೆಯಲಿದೆ.
ಬೆಳ್ಳಿ ಹಬ್ಬದ ಪ್ರಯುಕ್ತ ಸಭಾಭವನ, ಶೌಚಾಲಯ, ಶಾಲಾ ವಾಹನ ಸೇರಿ ಒಂದು ಕೋಟಿ ರೂಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ನಡೆಸಲಾಗಿದೆ ಎಂದು ಅವರು ವಿವರಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿ ಜಯರಾಜ್ ಕುಕ್ಕೇಟಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror