ಸುಳ್ಯ :ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮ ನ.2 ರಂದು ನಡೆಯಲಿದೆ ಎಂದು ವಿವೇಕಾನಂದ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಸುಧಾಕರ ಕಾಮತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಿನ ಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಭಾಗವಹಿಸಲಿದ್ದಾರೆ. ಸಂಜೆ ಏಳರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ನೂತನ ಸಭಾಭವನ ‘ರಜತ ಕಿರಣ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕುಟುಂಬ ಪ್ರಬೋಧನ್ ಅಖಿಲ ಭಾರತ ಸಂಯೋಜಕರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಸಮಾರೋಪ ಸಂದೇಶ ನೀಡುವರು. ಎಂ.ಆರ್.ಪಿ.ಎಲ್ ನ ಮುಖ್ಯ ವ್ಯವಸ್ಥಾಪಕ(ಪ್ರೋಜಕ್ಟ್) ಶ್ರೀರಂಗ, ಸುಳ್ಯದ ಉದ್ಯಮಿ ಕೆ.ಕೃಷ್ಣ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಬಳಿಕ ಸಾಂಸ್ಕೃತಿಕ ವೈಭವ ನಡೆಯಲಿದೆ.
ಬೆಳ್ಳಿ ಹಬ್ಬದ ಪ್ರಯುಕ್ತ ಸಭಾಭವನ, ಶೌಚಾಲಯ, ಶಾಲಾ ವಾಹನ ಸೇರಿ ಒಂದು ಕೋಟಿ ರೂಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ನಡೆಸಲಾಗಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿ ಜಯರಾಜ್ ಕುಕ್ಕೇಟಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಉಪಸ್ಥಿತರಿದ್ದರು.
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…