ಸವಣೂರು : ಎ.ಜೆ.ಆಸ್ಪತ್ರೆ ಮಂಗಳೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು, ಯುವಕ ಮಂಡಲ ಸವಣೂರು, ಲಯನ್ಸ್ ಕ್ಲಬ್ ಪುತ್ತೂರು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಜನಜಾಗೃತಿ ವೇದಿಕೆ ಸವಣೂರು ವಲಯದ ಆಶ್ರಯದಲ್ಲಿ ಸವಣೂರು, ಬೆಳಂದೂರು, ಕಾಣಿಯೂರು ಗ್ರಾ.ಪಂ ಹಾಗೂ ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಕಾರದಲ್ಲಿ ನ. 24ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮೆಗಾ ಮೆಡಿಕಲ್ ಕ್ಯಾಂಪ್ ನಡೆಯಲಿದೆ. ಇದರ ಪೂರ್ವಭಾವಿ ಸಭೆಯು ಪುತ್ತೂರು ದರ್ಬೆ ಪ್ರಶಾಂತ್ ಮಹಲ್‍ನಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಮಾತನಾಡಿ ಸವಣೂರಿನ ಆಸುಪಾಸಿನ 9 ಗ್ರಾಮಗಳ ಜನರ ಆರೋಗ್ಯಕ್ಕಾಗಿ ಈ ಮೆಡಿಕಲ್ ಕ್ಯಾಂಪ್‍ನ್ನು ಆಯೋಜಿಸಲಾಗಿದ್ದು, ಈ ಕ್ಯಾಂಪ್‍ನಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರ ಎಲ್ಲ ರೀತಿಯ ಅರೋಗ್ಯ ತಪಾಸಣೆಯು ನಡೆಯಲಿದೆ, ಎ.ಜೆ.ಆಸ್ಪತ್ರೆಯ ನುರಿತ ವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯುವಂತೆ ವಿನಂತಿಸಿದರು.
ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಎ.ಜೆ. ಆಸ್ಪತ್ರೆಯ ದಿಲೀಪ್, ಸುಮಂತ್, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ರಂಜನ್ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ, ಪದವಿ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮಿ ಎಸ್ ರೈ, ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಿನಾರ, ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಸವಣೂರು, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ.ರವರುಗಳು ಭಾಗವಹಿಸಿದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…