ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್, ದೇವರಕಾನ ಶ್ರೀ ಲಕ್ಷ್ಮೀನರಸಿಂಹ ಸೇವಾ ಟ್ರಸ್ಟ್ ಮುರುಳ್ಯ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಹಾಗು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸುಳ್ಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ, ನೇತ್ರ ತಪಾಸಣೆ ಹಾಗು ಕನ್ನಡಕ ವಿತರಣೆ ಹಾಗು ಕ್ಯಾನ್ಸರ್ ಖಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ನ.5 ರಂದು ಮುರುಳ್ಯದ ದೇವರಕಾನ ಶ್ರೀಲಕ್ಷ್ಮೀನರಸಿಂಹ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ನುರಿತ ಹಾಗು ಅನುಭವಿ ತಜ್ಞರಿಂದ ಪರೀಕ್ಷೆಗಳು ನಡೆಯಲಿದ್ದು, ಈ.ಸಿ.ಜಿ ಮೂಲಕ ಹೃದ್ರೋಗ ತಪಾಸಣೆ, ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆ, ಸ್ತ್ರೀರೋಗ ತಪಾಸಣೆ, ಸಾಮಾನ್ಯ ರೋಗಗಳ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ತಪಾಸಣಾ ಸೌಲಭ್ಯಗಳನ್ನು ಶಿಬಿರ ನೀಡುತ್ತಿದೆ. ರೋಟರಿ ಜಿಲ್ಲೆ 3181 ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…