ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…