ಸುಳ್ಯ: ನಾಡಿನ ಹಿರಿಯ ಸಹಕಾರಿ, ಸಾಮಾಜಿಕ ಧುರೀಣ ಜಾಕೆ ಮಾಧವ ಗೌಡರಿಗೆ 7೦ ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸುವ ಜಾಕೆ ಸಪ್ತತಿ ಕಾರ್ಯಕ್ರಮ ನ.16 ರಂದು ಪಂಜದಲ್ಲಿ ನಡೆಯಿತು.
ಪಂಜ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಜಾಕೆ ಮಾಧವ ಗೌಡ ಅವರನ್ನು ಕರೆ ತರಲಾಯಿತು. ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಜಾಕೆ ಮಾಧವ ಗೌಡರನ್ನು ಸನ್ಮಾನಿಸಿದರು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಬಿಳಿಮಲೆ ಅಭಿನಂದನಾ ಭಾಷಣ ಮಾಡಿದರು.
ಹಿರಿಯ ಸಾಹಿತಿ ಟಿ.ಜಿ.ಮುಡೂರು, ಅಭಿನಂದನಾ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಕಾರ್ಯದರ್ಶಿ ಶಶಿಧರ ಪಳಂಗಾಯ, ಕೋಶಾಧಿಕಾರಿ ಸುರೇಶ್‌ಕುಮಾರ್ ನಡ್ಕ ಮತ್ತಿತರರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…