ಪಂಜಿಗಾರು ಬೊಬ್ಬೆಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ : ಅಧಿಕಾರಿಗಳ ಭರವಸೆ

June 24, 2019
7:24 PM

ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ  ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ  ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು. 

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್  ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.

 

 

 

ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು  ಉದ್ಘಾಟಿಸಿದರು.  ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್,  ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.

ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ಸತೀಶ್‍ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್   ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror