ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು.
Advertisement
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್ ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.
ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್, ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.
ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ಸತೀಶ್‍ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್ ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…