ಬೆಳ್ಳಾರೆ: ಪಂಜ ಲಯನ್ಸ್ ಕ್ಲಬ್ ವತಿಯಿಂದ ಕಾನೂನು ಮಾಹಿತಿಗಳ ಕುರಿತು ವಿಶೇಷ ಕಾರ್ಯಕ್ರಮ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕಾಲೇಜು ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ನ್ಯಾಯವಾದಿ ಮತ್ತು ನೋಟರಿ ನಳಿನ್ ಕೋಡ್ತುಗುಳಿ ಹಾಗು ಸುಬ್ರಹ್ಮಣ್ಯ ಠಾಣಾಧಿಕಾರಿ ಚಂದಪ್ಪ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕು, ರಸ್ತೆ ಸುರಕ್ಷತಾ ಕಾನೂನು, ಮಾದಕ ದ್ರವ್ಯ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ವಿಶೇಷ ಮಾಹಿತಿ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್‍ಕುಮಾರ್ ನಡ್ಕ ವಹಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ತುಕರಾಮ ಏನೆಕಲ್, ಕಾರ್ಯದರ್ಶಿ ಶಶಿಧರ್ ಪಳಂಗಾಯ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ದೇಶಕ ಪುರುಷೋತ್ತಮ ದಂಬೆಕೋಡಿ ನಿರೂಪಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel