ಪಂಜ : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜಾನುವಾರು ಅಭಿವೃದ್ಧಿ ಅಧಿಕಾರಿ ಮತ್ತು ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರು ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಡಾ. ದೇವಿಪ್ರಸಾದ್ ಕಾನತ್ತೂರು ಅವರು ಅಧಿಕಾರ ಸ್ವೀಕರಿಸಿದರು.
ವ್ಯವಸ್ಥಾಪನಾ ಸಮತಿಯ ಮಾಜಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅಧಿಕಾರ ಹಸ್ತಾಂತರಿಸಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಗಂಗಾಧರ ಗೌಡ ಗುಂಡಡ್ಕ, ಮಾಯಿಲಪ್ಪ ಗೌಡ, ಲೋಕೇಶ್ ಆಕ್ರಿಕಟ್ಟೆ, ರಜಿತ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel