ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್‌ವೇರ್‌ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್‌ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.
ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…