ಸುಳ್ಯ: ಪಂಜ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆಯ ಎಣ್ಮೂರಿನಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಬೆಳೆಯ ಕಟಾವಿನ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಜ್ಞಾನ ಹೀಗೆ ಎರಡು ವಿಧದಲ್ಲಿ ಭತ್ತದ ಬೆಳೆಯನ್ನು ಕಟಾವು ಮಾಡುವ ಬಗ್ಗೆ ವೀಕ್ಷಣೆಗೆ ಅವಕಾಶ ಮಾಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಕುಮಾರ್ ನಡ್ಕ ಅವರ ಭತ್ತದ ಗದ್ದೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು ಎಪ್ಪತ್ತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ಕೃಷಿ ಯಂತ್ರಧಾರೆ ಕೇಂದ್ರದ ಪ್ರಬಂಧಕರಾದ ಸಂತೋಷ್ ಸರಕಾರದ ವತಿಯಿಂದ ಕೃಷಿ ಯಂತ್ರಧಾರೆ ಕೇಂದ್ರದಲ್ಲಿ ಲಭ್ಯವಿರುವ ಕೃಷಿ ಯಂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು .
ವೇದಿಕೆಯಲ್ಲಿ ಶಿಕ್ಷಕ ಮೋಹನ್ ಎಣ್ಮೂರು, ಲಯನ್ಸ್ ಜಿಲ್ಲಾ ಸದಸ್ಯರಾದ ಜಾಕೆ ಮಾಧವ ಗೌಡ, ಎಸ್ ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ ಕುಳ್ಸಿಗೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕರಾದ ಸಂತೋಷ್, ಉಷಾ, ಸುಮಿತ್ರಾ, ಸುಂದರ ಗೌಡ ಆರೆಂಬಿ, ಧರ್ಮಪಾಲ ನಡ್ಕ, ಸೋಮಪ್ಪ ಗೌಡ ಕುಳ್ಸಿಗೆ ಮಮತಾ ನಡ್,ಕ ಕುಸುಮಾವತಿ ಕಳುವಾಜೆ ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕುದ್ವ ವಂದಿಸಿದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…