ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ, ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…