ಸುಳ್ಯ:ಇತ್ತೀಚೆಗೆ ನಡೆದ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸೂಚನೆಗಳನ್ನು ಮೀರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗ್ರಾಮದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣದಿಂದ ಎಸ್.ಎನ್.ಮನ್ಮಥ, ಚಂದ್ರಶೇಖರ ಶಾಸ್ತ್ರಿ, ಸಂತೋಷ್ ಕುತ್ತಮೊಟ್ಟೆಯವರನ್ನು ಹಾಗೂ ಪಾರ್ಟಿಯ ನಿರ್ಣಯಕ್ಕೆ ವಿರುದ್ಧವಾಗಿ ನಿಂತ ವಿಷ್ಣು ಭಟ್ ಮೂಲೆತೋಟ ಅವರರನ್ನು ಭಾರತೀಯ ಜನತಾ ಪಾರ್ಟಿಯಿಂದ ದೂರಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಸುಳ್ಯ ಮಂಡಲ ಸಮಿತಿಯ ನೇತೃತ್ವದಲ್ಲಿ ಜ.23 ರಂದು ಸುಳ್ಯ ವೆಂಕಟರಮಣ ದೇವಮಂದಿರದ ಸಭಾಭವನದಲ್ಲಿ ಮಂಡಲ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಇದನ್ನು ಜಿಲ್ಲಾ ಸಮಿತಿಗೆ ತಿಳಿಸಲಾಗುತ್ತದೆ. ಆದ್ದರಿಂದ ಬಿಜೆಪಿಗೂ ಅವರಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…