ಬೆಂಗಳೂರು: ಪತ್ರಕರ್ತರು ಉಚಿತ ಚಿಕಿತ್ಸೆ ಪಡೆಯಲು ತಕ್ಷಣವೇ ಹೆಲ್ತ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಸಂಘದ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಮಾನ್ಯತೆ ಹೊಂದಿದ ಪತ್ರಕರ್ತರನ್ನು ಹೊರತುಪಡಿಸಿ, ಜಿಲ್ಲಾ ಮಟ್ಟದಲ್ಲಿರುವ ಪತ್ರಕರ್ತರಿಗೆ ಆಯಾ ಜಿಲ್ಲೆ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಒದಗಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಆದೇಶಿಸಿದರು.
ಅಕಾಲಿಕ ಮರಣಕ್ಕೆ ತುತ್ತಾಗುವ ಕಾರ್ಯನಿರತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪತ್ರಕರ್ತರ ನಿವೃತ್ತಿ ವೇತನ ಪಡೆಯಲು ಅಡ್ಡಿಯಾಗಿರುವ ನಿಯಮಾವಳಿಗಳನ್ನು ಸರಳೀಕರಿಸಲು ಸೂಚಿಸಿದರು. ಎಲ್ಲ ವರ್ಗದ ಆರ್ಥಿಕವಾಗಿ ಹಿಂದುಳಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ನೀಡಲು ಆದೇಶಿಸಿದ ಸಿಎಂ, ಈಗಿರುವ ವಸತಿ ಯೋಜನೆಯಲ್ಲಿ ಪತ್ರಕರ್ತರಿಗೂ ಮನೆ ನಿರ್ವಿುಸಿಕೊಡಲು ಆದ್ಯತೆ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಿರುವ ಪತ್ರಕರ್ತರ ಭವನಕ್ಕೆ ಆರ್ಥಿಕ ನೆರವು, ಕೊಪ್ಪಳದಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ ನೀಡಲಾಗುವುದು ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಐಎಫ್ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಸಂಘದ ವತಿಯಿಂದ ನೆರೆಸಂತ್ರಸ್ತರ ನಿಧಿಗೆ 1 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…