Advertisement
ಕಾರ್ಯಕ್ರಮಗಳು

ಪತ್ರಕರ್ತರ ಗ್ರಾಮ ವಾಸ್ತವ್ಯ- ಮಡಪ್ಪಾಡಿಯಲ್ಲಿ ಸಿದ್ಧತಾ ಸಭೆ

Share

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತಾ ಸಭೆ ಮಡಪ್ಪಾಡಿ ಯುವಕಮಂಡಲದ ಸಭಾಭವನದಲ್ಲಿ ಶನಿವಾರ ನಡೆಯಿತು.

Advertisement
Advertisement
Advertisement

Advertisement

ಪತ್ರಕರ್ತರ ಸಂಘದ ವಿನೂತನ ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜನಪ್ರತಿನಿಧಿಗಳು, ವಿವಿಧ ಇಲಾಖಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗು ಪತ್ರಕರ್ತರು ಸೇರಿ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಸಿದ್ಧತಾ ಸಭೆಯಲ್ಲಿ ಭಾಗವಹಿಸಿದವರು ಗ್ರಾಮದ ಹಲವಾರು ಸಮಸ್ಯೆಗಳ ಪಟ್ಟಿಯನ್ನು ಮುಂದಿರಿಸಿದರು. ಗ್ರಾಮದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮವಾಸ್ತವ್ಯ ಕಾರಣವಾಗಬೇಕು ಎಂದು ಸಭೆಯಲ್ಲಿ ಮಾತನಾಡಿದ ಪ್ರಮುಖರು ಅಭಿಪ್ರಾಯ ವ್ಯಕ್ತಪಡಿಸಿದರು.

ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ ಗ್ರಾಮದ ಅಭಿವೃದ್ಧಿಯ ದೃಷ್ಠಿಯಿಂದ ಪೂರಕವಾಗಿ ಕಾರ್ಯಕ್ರಮವನ್ನು ಜೋಡಿಸಲಾಗಿದೆ. ರಸ್ತೆ ಸಮಸ್ಯೆ ಸೇರಿ ಗ್ರಾಮದ ಹಲವು ಸಮಸ್ಯೆಗಳು ಗಮನದಲ್ಲಿ ಇದೆ. ಗ್ರಾಮದಲ್ಲಿನ ಪ್ರಮುಖ ಸಮಸ್ಯೆಗಳ ಎಂದು ಪಟ್ಟಿ ತಯಾರಿಸಿ ನೀಡಲು ಸೂಚನೆ ನೀಡಲಾಗಿದೆ ಎಂದರು.

Advertisement

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ ಮಾತನಾಡಿ ಗ್ರಾಮವಾಸ್ತವ್ಯ ಕಾರ್ಯಕ್ರ‌ಮ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೂಡಿ ಬರಲಿ ಎಂದು ಹೇಳಿದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ವಿನಯಕುಮಾರ್ ಮುಳುಗಾಡು ಗ್ರಾಮದ ವಿವಿಧ ಸಮಸ್ಯೆಗಳ ಪಟ್ಟಿ ಮಂಡಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಮಹಾತ್ಮಾ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ಪತ್ರಕರ್ತ ಡಾ.ಯು.ಪಿ.ಶಿವಾನಂದ ಮತ್ತಿತರರು ಮಾತನಾಡಿದರು.

Advertisement

ಮಡಪ್ಪಾಡಿ ಶಾಲೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯದ ಸಿದ್ಧತೆ ಮತ್ತು ಆತಿಥ್ಯದ ಬಗ್ಗೆ ಚರ್ಚಿಸಲಾಯಿತು. ಪ್ರಮುಖರನ್ನೊಳಗೊಂಡ ಸಂಚಲನಾ ಸಮಿತಿಯನ್ನು ರಚಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ ಸಭೆಯ ಅಧ್ಯಕ್ಷತೆ ವಹಿಸಿದ್ದರು‌. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಉಪನಿರೀಕ್ಷಕ ಎಂ.ಆರ್.ಹರೀಶ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ದುರ್ಗಾಕುಮಾರ್ ನಾಯರ್ ಕೆರೆ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗ್ರಾಮ ವಾಸ್ತವ್ಯದ ಕುರಿತು ವಿವರ ನೀಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ ಮತ್ತು ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

ಸಂಘಟನಾ ಸಮಿತಿ ರಚನೆ: ಕಾರ್ಯಕ್ರಮದ ಯಶಸ್ವಿಗಾಗಿ ಗ್ರಾಮದ ಪ್ರ‌ಮುಖರನ್ನೊಳಗೊಂಡ ಸಂಘಟನಾ ಸಮಿತಿ ರಚಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಮಹಾತ್ಮಾ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದ ಸಮಿತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಒಕ್ಕೂಟ, ನವೋದಯ ಸ್ವಸಹಾಯ ಸಂಘ, ಯುವಕ ಮಂಡಲ, ಯುವತಿ ಮಂಡಲ, ಶಾಲಾಭಿವೃದ್ಧಿ ಸಮಿತಿ, ಮಹಾತ್ಮಾಗಾಂಧಿ ಗ್ರಾಮ ಸೇವಾ ತಂಡ, ಮಂಜುಶ್ರೀ ಕಲಾ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು ಸಮಿತಿಯ ಸದಸ್ಯರಾಗಿದ್ದರುತ್ತಾರೆ. ಬಳಿಕ ಸಮಿತಿಯ ಪ್ರಮುಖರು ಮತ್ತು ಪತ್ರಕರ್ತರ ಸಂಘದ ಸದಸ್ಯರು ಮಡಪ್ಪಾಡಿ ಶಾಲೆಗೆ ಭೇಟಿ ನೀಡಿ ಕಾರ್ಯಕ್ರಮದ ಯಶಸ್ವಿಗೆ ಮಾಡಬೇಕಾದ ಕೆಲಸಗಳ ಬಗ್ಗೆ ರೂಪುರೇಷೆ ತಯಾರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

12 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

1 day ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

3 days ago