ಧರ್ಮಸ್ಥಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಧರ್ಮಸ್ಥಳದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ಶೀಘ್ರವೇ ನೂತನ ಬಸ್ ಕೊಡಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ವಿನಂತಿಸಲಾಯಿತು.
ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ಸೌಲಭ್ಯ ನೀಡಿದ ಮುಖ್ಯಮಂತ್ರಿ ಬಿ.ಯಸ್ ಯೆಡಿಯೂರಪ್ಪ ಅವರನ್ನು ಜಿಲ್ಲಾ ಸಂಘದ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎನ್.ಪುಷ್ಪರಾಜ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…