ಪತ್ರಕರ್ತರ ರಾಜ್ಯ ಸಮ್ಮೇಳನ ಮಾಹಿತಿ ಕೈಪಿಡಿ ಬಿಡುಗಡೆ

January 21, 2020
7:56 PM

ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾ.7 ಮತ್ತು 8ರಂದು ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪೂರ್ವಭಾವಿಯಾಗಿ ‘ಮಾಹಿತಿ ಕೈಪಿಡಿ’ಯನ್ನು ಶಾಸಕ, ಸಮ್ಮೇಳನ ಕಾರ್ಯಾಧ್ಯಕ್ಷ ಡಿ.ವೇದವ್ಯಾಸ ಕಾಮತ್ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು.

Advertisement
Advertisement

ಇಂತಹ ಸಮ್ಮೇಳನದಿಂದ ರಾಜ್ಯಮಟ್ಟದಲ್ಲಿ ಮಂಗಳೂರು ಖ್ಯಾತಿ ಪಡೆಯಲಿದೆ. ಬ್ರಾೃಂಡ್ ಮಂಗಳೂರು ಪರಿಕಲ್ಪನೆ ಸಾಧ್ಯವಾಗುವುದರ ಜತೆಗೆ ಮಂಗಳೂರಿನ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ರಾಜ್ಯಮಟ್ಟದ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂದರು.

ಸಮ್ಮೇಳನ ಸಮಿತಿ ಸಂಚಾಲಕ, ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಆತಿಥ್ಯಕ್ಕೆ ಉತ್ತಮ ಹೆಸರು ಪಡೆದಿದ್ದು, ಆದ್ದರಿಂದಲೇ ಹೊರಗಿನವರು ಮಂಗಳೂರನ್ನು ಹೆಚ್ಚು ಇಷ್ಟ ಪಡುತ್ತಾರೆ. ಇಂತಹ ಸಮ್ಮೇಳನದಿಂದ ಧಾರ್ಮಿಕ ಮತ್ತು ಬೀಚ್ ಪ್ರವಾಸೋದ್ಯಮಕ್ಕೆ ಅವಕಾಶ ಸಿಗುವುದರ ಜತೆಗೆ ಮಂಗಳೂರಿನ ಬ್ರಾೃಂಡ್ ವ್ಯಾಲ್ಯೂ ಕೂಡ ಜಾಸ್ತಿಯಾಗುತ್ತದೆ ಎಂದರು.

ಮಂಗಳೂರು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ,ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಉಪಸ್ಥಿತರಿದ್ದರು.

ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ
ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ
June 27, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group