ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ ಜ.31ರಂದು ಬೆಳಗ್ಗೆ 10:00 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಕರ್ತರ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್ , ಡಾ.ಭರತ್ ಶೆಟ್ಟಿ ವೈ , ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ , ಮಂಗಳೂರು ಪೊಲೀಸ್ ಆಯುಕ್ತ ಡಾ .ಪಿ ಯಸ್ ಹರ್ಷ , ದ.ಕ.ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ . ಆರ್.ಸೆಲ್ವಮಣಿ , ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ , ಅಪರ ಜಿಲ್ಲಾಧಿಕಾರಿ ಎಂ .ಜೆ .ರೂಪಾ ,ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…