ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

August 26, 2019
8:22 AM

 

Advertisement
Advertisement

ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಸುಮಾರು 3 ವಾರಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅಲ್ಲಿಂದ ಕರೆ ತಂದು ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಳೇಜಿನಲ್ಲಿ ತೀವ್ರ ನಿಘಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು, ಮೂವರು ಸಹೋದರರು, ಓರ್ವ ಸಹೋದರಿಯ ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

Advertisement

ಎರಡೂವರೆ ದಶಕದ ಪತ್ರಿಕಾ ಸೇವೆ:ಸುಮಾರು ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ದುಡಿದ ಚಂದ್ರೇಶ್ ಗೋರಡ್ಕ ಸುಳ್ಯದಲ್ಲಿ ಚಿರಪರಿಚಿತರಾಗಿದ್ದಾರು.
ಸುದ್ದಿ ಬಿಡುಗಡೆ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿ ಸುಮಾರು ಒಂದೂವರೆ ದಶಕಗಳಿಗಿಂತಲೂ ಹೆಚ್ಚು ಕಾಲ ಸುದ್ದಿ ಬಿಡುಗಡೆಯಲ್ಲಿ ಪತ್ರಕರ್ತರಾಗಿದ್ದರು. ಬಳಿಕ ಮಿತ್ರ ಅಬ್ದುಲ್ ಸತ್ತಾರ್ ಗೋರಡ್ಕ ಅವರೊಂದಿಗೆ ಸೇರಿ ಪಯಸ್ವಿನಿ ಪತ್ರಿಕೆಯನ್ನು ಆರಂಭಿಸಿದ್ದರು. ಪಯಸ್ವಿನಿಯಲ್ಲಿ ಪ್ರಕಾಶಕರಾಗಿ ಸಂಪಾದಕರಾಗಿ ದುಡಿದಿದ್ದರು. ‘ಕರಾವಳಿ ಅಲೆ’ಪತ್ರಿಕೆಯ ಸುಳ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ‘ನಮ್ಮ ಸುಳ್ಯ’ ಪತ್ರಿಕೆಯ ಸಂಪಾದಕರಾಗಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿಯಲ್ಲಿ ತೊಡಗಿ ಕೊಂಡಿದ್ದರು. ಕಾರ್ಯನಿರತ ಪತ್ರಕರ್ತರ ಸದಸ್ಯರಾಗಿದ್ದ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’
February 27, 2024
1:18 PM
by: The Rural Mirror ಸುದ್ದಿಜಾಲ
ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ
January 15, 2024
11:34 PM
by: ದ ರೂರಲ್ ಮಿರರ್.ಕಾಂ
ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |
November 25, 2023
1:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror