ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಸುಮಾರು 3 ವಾರಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅಲ್ಲಿಂದ ಕರೆ ತಂದು ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಳೇಜಿನಲ್ಲಿ ತೀವ್ರ ನಿಘಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು, ಮೂವರು ಸಹೋದರರು, ಓರ್ವ ಸಹೋದರಿಯ ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.
ಎರಡೂವರೆ ದಶಕದ ಪತ್ರಿಕಾ ಸೇವೆ:ಸುಮಾರು ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ದುಡಿದ ಚಂದ್ರೇಶ್ ಗೋರಡ್ಕ ಸುಳ್ಯದಲ್ಲಿ ಚಿರಪರಿಚಿತರಾಗಿದ್ದಾರು.
ಸುದ್ದಿ ಬಿಡುಗಡೆ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿ ಸುಮಾರು ಒಂದೂವರೆ ದಶಕಗಳಿಗಿಂತಲೂ ಹೆಚ್ಚು ಕಾಲ ಸುದ್ದಿ ಬಿಡುಗಡೆಯಲ್ಲಿ ಪತ್ರಕರ್ತರಾಗಿದ್ದರು. ಬಳಿಕ ಮಿತ್ರ ಅಬ್ದುಲ್ ಸತ್ತಾರ್ ಗೋರಡ್ಕ ಅವರೊಂದಿಗೆ ಸೇರಿ ಪಯಸ್ವಿನಿ ಪತ್ರಿಕೆಯನ್ನು ಆರಂಭಿಸಿದ್ದರು. ಪಯಸ್ವಿನಿಯಲ್ಲಿ ಪ್ರಕಾಶಕರಾಗಿ ಸಂಪಾದಕರಾಗಿ ದುಡಿದಿದ್ದರು. ‘ಕರಾವಳಿ ಅಲೆ’ಪತ್ರಿಕೆಯ ಸುಳ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ‘ನಮ್ಮ ಸುಳ್ಯ’ ಪತ್ರಿಕೆಯ ಸಂಪಾದಕರಾಗಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿಯಲ್ಲಿ ತೊಡಗಿ ಕೊಂಡಿದ್ದರು. ಕಾರ್ಯನಿರತ ಪತ್ರಕರ್ತರ ಸದಸ್ಯರಾಗಿದ್ದ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…