ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ,ವಸಂತ ಕುಮಾರ್ ಪೆರ್ಲ ಮತ್ತು ಬೆಸೆಂಟ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಪುರಸ್ಕೃತ ಸುಕೇಶ್ ಕುಮಾರ್ ದತ್ತಿನಿಧಿಯಿಂದ ‘ಬ್ರಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದೆ.
ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…