‘ಪದ್ಯಾಣ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

December 5, 2019
2:33 PM

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

Advertisement
Advertisement

ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.

Advertisement

ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.

ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 11, 2024
11:40 AM
by: ಸಾಯಿಶೇಖರ್ ಕರಿಕಳ
ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |
May 10, 2024
10:00 PM
by: ಮಹೇಶ್ ಪುಚ್ಚಪ್ಪಾಡಿ
ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror