ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಈ ಸಾಲಿನ ‘ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.
ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಪದ್ಯಾಣ ಪ್ರಶಸ್ತಿ ರೂಪುಗೊಂಡಿದೆ. ಮೂರು ವರುಷಗಳ ಹಿಂದೆ ಸ್ಥಾಪಿಸಿದ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರು, ಬಲಿಪ ನಾರಾಯಣ ಭಾಗವತರು, ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇವರಿಗೆ ಪ್ರದಾನಿಸಲಾಗಿತ್ತು.
ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಪ್ರತಿಯಾಗಿ ‘ಕಲಾಕೃತಜ್ಞತೆ’ಯ ದ್ಯೋತಕವಾಗಿ ಪದ್ಯಾಣ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.
ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಪರಂಪರೆಯ ಪ್ರಾತಿನಿಧಿಕ ಕಲಾವಿದ. ಪ್ರಸಿದ್ಧ ಮಾಂಬಾಡಿ ಮನೆತನ. ಇವರ ತಂದೆ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರು. ಸುಬ್ರಹ್ಮಣ್ಯ ಭಟ್ಟರು ಸಾವಿರಾರು ಹಿಮ್ಮೇಳ ಕಲಾವಿದರನ್ನು ರೂಪಿಸಿದವರು. ಕಳೆದ ಐದು ದಶಕಗಳಿಂದ ಯಕ್ಷ ಶಿಕ್ಷಣಕ್ಕೆ ಮಾನ ನೀಡಿದವರು. ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಅನುಭವಿ. ಈಗವರಿಗೆ ಪದ್ಯಾಣ ಪ್ರಶಸ್ತಿಯ ಬಾಗಿನ. ಈ ಸಂದರ್ಭದಲ್ಲಿ ‘ಶ್ರೀ ಹನುಮಗಿರಿ ಮೇಳ’ದವರಿಂದ ‘ಸತ್ಯಾಂತರಂಗ’ ಪ್ರಸಂಗದ ಬಯಲಾಟ ಜರುಗಲಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…