ಸುಳ್ಯ: ನೀರು ಇಂಗಿಸುವಿಕೆ, ಕಾಡಿನ ರಕ್ಷಣೆ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಭೂ ಒಡಲಿಗೆ ನೀರಿಂಗಿಸುವ ಕೆಲಸ ಸ್ನೇಹಶಾಲಾ ವಿದ್ಯಾರ್ಥಿಗಳಿಂದ ಆಗುತ್ತಿರುವುದು ಶ್ಲಾಘನೀಯ. ಪರಿಸರದ ಕಲಿಕೆ ಅನುಭವದಿಂದಾಗಬೇಕು. ಆ ಕೆಲಸ ಸ್ನೇಹ ಶಾಲೆಯಲ್ಲಿ ಆಗುತ್ತಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುವುದು ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆಗೆ ಅಗತ್ಯ ಎಂದು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ , ಅಂಕಣಕಾರ ನಾ.ಕಾರಂತ ಪೆರಾಜೆ ಹೇಳಿದರು.
ಅವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸ್ನೇಹಶಿಲಾ ಪತ್ರಿಕಾ ಬಿಡುಗಡೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ ನಿರಂತರ ಚಟುವಟಿಕೆಯ ಮೂಲಕ ತನ್ನನ್ನು ತಾನೇ ರೂಪಿಸಿಕೊಳ್ಳಬೇಕು. ಇಂದು ಜಲದ ಉಳಿವಿಗೆ ಹರಿವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಅಕ್ಷರ ಸಿ. ದಾಮ್ಲೆ ಅತಿಥಿಗಳ ಕಿರು ಪರಿಚಯ ಮಾಡಿದರು. ಶಿಕ್ಷಕಿ ಕುಮಾರಿ ಪ್ರತಿಮಾ ಕೆ.ಎಸ್ ವಂದಿಸಿದರು. ಶಿಕ್ಷಕಿ ಸವಿತಾ ಎಂ ನಿರೂಪಿಸಿದರು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…