ಸುಳ್ಯ:ಪರಿಸರ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ಹಿಸಿದ ಅರಂತೋಡು ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯ ಗರಿ.
ದ.ಕ. ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಘಟಕವನ್ನು ಹೊಂದಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನಿರ್ವಹಣೆ, ವಿಂಗಡಣೆ ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಾಡಿ ಪರಿಸರ ನಿರ್ವಹಣೆಯಲ್ಲಿ ಉತ್ತಮ ಕಾರ್ಯ ಕೈಗೊಳ್ಳುತ್ತಿರುವುದಕ್ಕೆ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಪ್ರಶಸ್ತಿ ನೀಡಲಾಗುತ್ತದೆ.
ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸಿಟಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ & ಗೈಡ್ಸ್ ದ.ಕ.ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಶಸ್ತಿ ಪ್ರದಾನ ಮಾಡಿದರು.
ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ರಾದ ಗಂಗಾಧರ ಬನ,ನಾಗೇಶ್ ಶೆಟ್ಟಿ ಪ್ತಶಸ್ತಿ ಸ್ವೀಕರಿಸಿದರು.