Advertisement
ಜಿಲ್ಲೆ

ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಮಾನವನ ಅವಾಂತರವೇ ಕಾರಣ

Share

ಪುತ್ತೂರು: ನೆಲ, ಜಲವೇ ಮುಂತಾದ ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಬಲಿಯಾಗಿ ಇನ್ನೆಂದೂ ಸರಿಪಡಿಸಲಾರದಷ್ಟು ಮಟ್ಟಿಗೆ ಹಾನಿಯನ್ನು ಹೊಂದಿವೆ ಎಂದು ಪರಿಸರ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್ ಹೊಳ್ಳ ಹೇಳಿದರು.

Advertisement
Advertisement
Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಐಎಸ್‍ಟಿಇ ಸ್ಟಾಫ್ ಚಾಪ್ಟರ್ ಇದರ ಆಶ್ರಯದಲ್ಲಿ ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತ ಮತ್ತು ಅದರ ಅಧ್ಯಯನ ಈ ವಿಷಯದ ಬಗ್ಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತಾಡಿದರು. ಮಾನವನ ಅವಾಂತರಗಳಿಂದ ಪದೇ ಪದೇ ಭೂಕುಸಿತಗಳು ಸಂಭವಿಸುತ್ತಿದ್ದು, ಕಳೆದ ಭಾರಿ ಉಂಟಾದ ಭೂಕುಸಿತಗಳು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದರು. ಐಐಎಸ್‍ಸಿ ಯ ತಂತ್ರಜ್ಞರ ಅಧ್ಯಯನದ ಪ್ರಕಾರ ಎತ್ತಿನ ಹೊಳೆ ಯೋಜನೆ ಒಂದು ವ್ಯರ್ಥ ಪ್ರಯತ್ನ. ಯೋಜನಾ ಪ್ರದೇಶದಲ್ಲೇ ಸಾಕಷ್ಟು ನೀರು ಲಭ್ಯವಿಲ್ಲ ಎಂದು ಅವರು ನುಡಿದರು.

Advertisement

ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕಳೆದ ಮಳೆಗಾಲದಲ್ಲಿ ನಡೆದ ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನ ಯೋಜನಾರಹಿತವಾದ ಕೆಲಸಗಳೇ ಕಾರಣ ಎಂದರು. ಹರಿಯುವ ನೀರನ್ನು ಚಲಿಸುವಂತೆ ಮಾಡಿ ಎಲ್ಲೆಡೆಯೂ ನೀರಿಂಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ನೀರಿನ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಪgಸರದ ಬಗ್ಗೆ ಜನಸಾಮಾನ್ಯರಲ್ಲಿ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿದೆ. ನಮ್ಮ ನಡೆ ಮತ್ತು ನುಡಿಯಲ್ಲಿ ಪರಿಸರದ ಬಗ್ಗೆ ಕಾಳಜಿ ಕಂಡುಬಂದರೆ ಪ್ರಾಕೃತಿಕ ಸಂಪತ್ತು ರಕ್ಷಣೆಯಾಗಬಹುದು ಎಂದರು.

Advertisement

ಪರಿಸರ ತಜ್ಞ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ ಡಾ.ಶ್ರೀಶ ಕುಮಾರ್, ವಿವೇಕಾನಂದ ಪಾಲಿಟೆಕ್ನಿಕ್‍ನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ  ಪ್ರೊ. ರವಿರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು .ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ, ಸುಮಂತ್ ವಂದಿಸಿದರು.  ಸಂಪದ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

10 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

10 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

19 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

21 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago