ತಿರುವನಂತಪುರ: ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…