ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.
ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.
ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008. ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…