Advertisement
ಧಾರ್ಮಿಕ

ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಮಾಡುವುದರ ಮಹತ್ವ

Share

ಸುಳ್ಯ:ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವದ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪ್ರವಚನವನ್ನು ನಡೆಸಲಾಯಿತು. ಈ ಸಂದರ್ಭ ನೀಡಿದ ಶ್ರಾದ್ಧದ ಮಹತ್ವದ ಬಗೆಗಿನ ಮಾಹಿತಿ ಇಲ್ಲಿದೆ..

‘ಶ್ರಾದ್ಧ’ ಎಂದು ಹೇಳಿದೊಡನೆ ಇಂದಿನ ವಿಜ್ಞಾನಯುಗದ ಯುವಪೀಳಿಗೆಯ ಮನಸ್ಸಿನಲ್ಲಿ ‘ಅಶಾಸ್ತ್ರೀಯ ಮತ್ತು ಅವಾಸ್ತವ ಕರ್ಮಕಾಂಡದ ಆಡಂಬರ’ ಎಂಬ ತಪ್ಪುಕಲ್ಪನೆಯು ಮೂಡುತ್ತದೆ. ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮವನ್ನು ಅರ್ಥಮಾಡಿಕೊಳ್ಳುವಲ್ಲಿನ ಅನಾಸಕ್ತಿ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ, ಧರ್ಮದ್ರೋಹಿ ಸಂಘಟನೆಗಳಿಂದ ಹಿಂದೂ ಧರ್ಮದ ರೂಢಿ-ಪರಂಪರೆಗಳ ಮೇಲೆ ಸತತವಾಗಿ ಆಗುತ್ತಿರುವ ದ್ವೇಷಪೂರ್ವಕ ಟೀಕೆ ಇತ್ಯಾದಿಗಳಿಂದ ಈ ಪರಿಣಾಮವಾಗಿದೆ. ಶ್ರಾದ್ಧದ ವಿಷಯದಲ್ಲಿ ಮುಂದಿನ ವಿಚಾರಸರಣಿಯು ಸಮಾಜದಲ್ಲಿ ಕಂಡುಬರುತ್ತದೆ. ಪೂಜೆ ಅರ್ಚನೆ, ಶ್ರಾದ್ಧಪಕ್ಷ ಮುಂತಾದವುಗಳ ಮೇಲೆ ವಿಶ್ವಾಸವನ್ನಿಡದ ಅಥವಾ ಸಮಾಜಕಾರ್ಯವೇ ಸರ್ವ ಶ್ರೇಷ್ಠವಾಗಿದೆ ಎಂದು ಹೇಳುವವರು ಪಿತೃಗಳಿಗಾಗಿ ಶ್ರಾದ್ಧವಿಧಿಗಳನ್ನು ಮಾಡದೇ ಅದರ ಬದಲು, ‘ಬಡವರಿಗೆ ಅನ್ನದಾನ ಮಾಡುವೆವು ಅಥವಾ ಶಾಲೆಗಳಿಗೆ ಸಹಾಯ ಮಾಡುವೆವು’ ಎಂದು ಹೇಳುತ್ತಾರೆ! ಅನೇಕ ಜನರು ಇದೇ ರೀತಿ ಮಾಡುತ್ತಾರೆ! ಹೀಗೆ ಮಾಡುವುದೆಂದರೆ, ‘ಒಬ್ಬ ರೋಗಿಗೆ ಶಸ್ತ್ರಚಿಕಿತ್ಸೆ ಮಾಡದೇ, ಅದರ ಬದಲು ನಾವು ಬಡವರಿಗೆ ಅನ್ನದಾನ ಮಾಡುವೆವು, ಶಾಲೆಗೆ ಸಹಾಯ ಮಾಡುವೆವು’ ಎಂದು ಹೇಳಿದಂತೆಯೇ ಆಗಿದೆ. ಶ್ರಾದ್ಧದಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವಂತಹ ಸೂಕ್ಷ್ಮಶಕ್ತಿಯು ಒಳಗೊಂಡಿರುತ್ತದೆ; ಅದರಿಂದಾಗಿ ಪಿತೃಗಳಿಗೆ ಗತಿ ಸಿಗಲು ಸಾಧ್ಯವಾಗುತ್ತದೆ. ಹಾಗಾಗಿ ಮೇಲಿನ ಹೇಳಿಕೆಗಳು ಹಾಸ್ಯಾಸ್ಪದವೆನಿಸಿಕೊಳ್ಳುತ್ತವೆ.

ಹಿಂದೂಧರ್ಮದಲ್ಲಿ ಹೇಳಿರುವ ಈಶ್ವರಪ್ರಾಪ್ತಿಯ ಮೂಲಭೂತ ಸಿದ್ಧಾಂತಗಳಲ್ಲಿ ‘ದೇವಋಣ, ಋಷಿಋಣ, ಪಿತೃಋಣ ಮತ್ತು ಸಮಾಜಋಣವನ್ನು ತೀರಿಸುವುದು’ ಒಂದು ಮುಖ್ಯ ಉದ್ದೇಶವಾಗಿದೆ. ಇವುಗಳಲ್ಲಿ ಪಿತೃಋಣವನ್ನು ತೀರಿಸಲು ‘ಶ್ರಾದ್ಧಕರ್ಮ’ವು ಆವಶ್ಯಕವಾಗಿದೆ. ತಂದೆತಾಯಿ ಮತ್ತು ಸಂಬಂಧಿಕರ ಮರಣೋತ್ತರ ಪ್ರಯಾಣವು ಸುಖಕರ ಮತ್ತು ಕ್ಲೇಶರಹಿತವಾಗಿ, ಅವರಿಗೆ ಸದ್ಗತಿಯು ಸಿಗಬೇಕೆಂದು ಮಾಡಬೇಕಾದ ಸಂಸ್ಕಾರಕ್ಕೆ ‘ಶ್ರಾದ್ಧ’ ಎನ್ನುತ್ತಾರೆ. ಶ್ರಾದ್ಧಕರ್ಮಗಳಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವ ಸೂಕ್ಷ್ಮಶಕ್ತಿ ಇದೆ. ಶ್ರಾದ್ಧಕರ್ಮಗಳಲ್ಲಿ ಪಿತೃಗಳಿಗೆ ಹವಿರ್ಭಾಗವನ್ನು ಕೊಡುವುದರಿಂದ ಅವರು ಸಂತುಷ್ಟರಾಗುತ್ತಾರೆ. ಶ್ರಾದ್ಧವನ್ನು ಮಾಡದಿದ್ದರೆ ಪಿತೃಗಳ ಆಸೆಗಳು ಅತೃಪ್ತವಾಗಿ ಉಳಿಯುತ್ತವೆ ಮತ್ತು ಈ ವಾಸನಾಯುಕ್ತ ಪಿತೃಗಳು ದುಷ್ಟ ಶಕ್ತಿಗಳ ಅಧೀನಕ್ಕೊಳಪಟ್ಟು ಅವರ ಗುಲಾಮರಾಗುತ್ತಾರೆ. ದುಷ್ಟ ಶಕ್ತಿಗಳು ವಾಸನಾಯುಕ್ತ ಪಿತೃಗಳ ಮೂಲಕ ಕುಟುಂಬದವರಿಗೆ ತೊಂದರೆಗಳನ್ನು ಕೊಡುವ ಸಂಭವವೂ ಇರುತ್ತದೆ. ಶ್ರಾದ್ಧವನ್ನು ಮಾಡುವುದರಿಂದ ಪಿತೃಗಳು ಆ ತೊಂದರೆಗಳಿಂದ ಮುಕ್ತರಾಗುವುದಲ್ಲದೇ ನಮ್ಮ ಜೀವನವೂ ಸುಖಮಯವಾಗುತ್ತದೆ.

ಶ್ರಾದ್ಧಕ್ಕೆ ಇಷ್ಟೊಂದು ಮಹತ್ವವಿದ್ದರೂ ಇಂದು ಹಿಂದೂಗಳಲ್ಲಿರುವ ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮಶಾಸ್ತ್ರದ ಮೇಲಿನ ಅವಿಶ್ವಾಸ, ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರಣೆ ಇತ್ಯಾದಿಗಳಿಂದ ಶ್ರಾದ್ಧವಿಧಿಯು ಅಲಕ್ಷಿಸಲ್ಪಟ್ಟಿದೆ. ಶ್ರಾದ್ಧಕರ್ಮವನ್ನು ವಾಸ್ತವವಿಲ್ಲದ ಅಯೋಗ್ಯ ಕರ್ಮಕಾಂಡವೆಂದು ಪರಿಗಣಿಸಲ್ಪಡುತ್ತ್ತಿದೆ. ಆದುದರಿಂದ ಶ್ರಾದ್ಧ ಸಂಸ್ಕಾರವೂ ಇತರ ಸಂಸ್ಕಾರಗಳಷ್ಟೇ ಆವಶ್ಯಕವಾಗಿದೆ ಎಂಬುದನ್ನು ಹೇಳುವುದು ಆವಶ್ಯಕವಾಗಿದೆ.

ಶ್ರಾದ್ಧವನ್ನು ಮಾಡುವುದರಿಂದ ಪೂರ್ವಜರ ತೊಂದರೆಗಳಿಂದ ನಮ್ಮ ರಕ್ಷಣೆ ಹೇಗಾಗುತ್ತದೆ ?

‘ಶ್ರಾದ್ಧದಿಂದ ನಿರ್ಮಾಣವಾದ ಇಂಧನವು ಮೃತವ್ಯಕ್ತಿಯ ಲಿಂಗದೇಹದಲ್ಲಿನ ತ್ರಿಗುಣಗಳ ಇಂಧನಗಳೊಂದಿಗೆ ಹೋಲುತ್ತದೆ; ಆದುದರಿಂದ ಶ್ರಾದ್ಧದಿಂದ ನಿರ್ಮಾಣವಾದ ಇಂಧನವು ಲಿಂಗದೇಹಕ್ಕೆ ದೊರಕಿ ಅದು ಕಡಿಮೆ ಕಾಲಾವಧಿಯಲ್ಲಿ ಮರ್ತ್ಯಲೋಕವನ್ನು ದಾಟುತ್ತದೆ. (ಮರ್ತ್ಯಲೋಕವು ಭೂಲೋಕ ಮತ್ತು ಭುವರ್ಲೋಕಗಳ ಮಧ್ಯದಲ್ಲಿರುತ್ತದೆ.) ಮೃತ್ಯುಲೋಕವನ್ನು ದಾಟಿದ ಲಿಂಗದೇಹಗಳಿಗೆ ಪುನಃ ಪೃಥ್ವಿಯ ವಾತಾವರಣ ಕಕ್ಷೆಯಲ್ಲಿ ಬಂದು ಪೃಥ್ವಿಯ ಮೇಲಿನ ಜನರಿಗೆ ತೊಂದರೆ ಕೊಡಲು ಸಾಧ್ಯವಾಗುವುದಿಲ್ಲ. ಆದುದರಿಂದ ಶ್ರಾದ್ಧವನ್ನು ಮಾಡುವುದಕ್ಕೆ ಬಹಳ ಮಹತ್ವವಿದೆ, ಇಲ್ಲದಿದ್ದರೆ ವಾಸನೆಗಳಲ್ಲಿ ಸಿಲುಕಿಕೊಂಡಿರುವ ಅನೇಕ ಲಿಂಗದೇಹಗಳು ಸಾಧಕರಿಗೆ ತೊಂದರೆಗಳನ್ನು ಕೊಟ್ಟು ಅವರನ್ನು ಸಾಧನೆಯಿಂದ ವಿಮುಖಗೊಳಿಸಬಲ್ಲವು’. – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೧.೩.೨೦೦೫, ಸಾಯಂ. ೬.೪೩)

ಶ್ರಾದ್ಧದಿಂದ ಆಗುವ ಲಾಭಗಳು:

ಶ್ರಾದ್ಧವನ್ನು ಮಾಡುವುದರಿಂದ ಯಾವ ಫಲಪ್ರಾಪ್ತಿಯಾಗುತ್ತದೆ ಎಂಬುದರ ಬಗ್ಗೆ ಗರುಡಪುರಾಣದ ಒಂದು ಶ್ಲೋಕವು ಮುಂದಿನಂತಿದೆ –

ಆಯುಃ ಪುತ್ರಾನ್ ಯಶಃ ಸ್ವರ್ಗಂ ಕೀರ್ತಿಂ ಪುಷ್ಟಿಂ ಬಲಂ ಶ್ರಿಯಮ್ |
ಪಶುನ್ ಸೌಖ್ಯಂ ಧನಂ ಧಾನ್ಯಂ ಪ್ರಾಪ್ನುಯಾತ್ ಪಿತೃಪೂಜನಾತ್ |
– ಗರುಡಪುರಾಣ, ಅಂಶ ೨, ಅಧ್ಯಾಯ ೧೦, ಶ್ಲೋಕ ೫೭

ಅರ್ಥ: ಆಯುಷ್ಯ, ಪುತ್ರ, ಯಶಸ್ಸು, ಸ್ವರ್ಗ, ಕೀರ್ತಿ, ಪುಷ್ಠಿ, ಬಲ, ಲಕ್ಷ್ಮೀ, ಪಶು, ಸೌಖ್ಯ, ಧನ, ಧಾನ್ಯ ಇವು ಪಿತೃಪೂಜೆಯಿಂದ, ಅಂದರೆ ಶ್ರಾದ್ಧದಿಂದ ಸಿಗುತ್ತವೆ.

ಆ. ಗ್ರಹಣಕಾಲದಲ್ಲಿ ಶ್ರಾದ್ಧವನ್ನು ಮಾಡುವುದರಿಂದ ಶ್ರಾದ್ಧ ಮಾಡಿದವನಿಗೆ ಭೂದಾನದ ಫಲ ಸಿಗುತ್ತದೆ.

(ಆಧಾರ : ಸನಾತನ ಸಂಸ್ಥೆಯು ನಿರ್ಮಿಸಿದ ಗ್ರಂಥ ‘ಶ್ರಾದ್ಧ – 2 ಭಾಗಗಳು’)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

1 hour ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

3 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

9 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

10 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

11 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

12 hours ago