ಮಂಗಳೂರು : ಮಾರ್ಚ್ 4 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ಹೊರಡಿಸಿರುತ್ತಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಮಾಹಿತಿಗಳನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸನ್ನೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್, ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ, ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ದ.ಕ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…