ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಜನತೆ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ಯುವಜನತೆಯನ್ನು ಕೃಷಿಯೆಡೆಗೆ ಸೆಳೆಯುವ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಆಸಕ್ತರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್” ಆಯೋಜಿಸಿದೆ. ಇದು, ಇದೇ ನ.30 ಹಾಗೂ ಡಿ.1ರಂದು ಶಾಲಾ ವಠಾರದಲ್ಲಿ ನಡೆಯಲಿದೆ.
ಕೃಷಿಕರ ಕಣ್ಮಣಿಯಾದ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸಹಭಾಗಿತ್ವದಲ್ಲಿ ನಡೆಯುವ ಈ ಕೃಷಿ ಉತ್ಸವದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಮತ್ತು ಕೃಷಿಕರು ವಿವಿಧ ವಯೋಮಾನದ ವಿಭಾಗಗಳಲ್ಲಿ ತಮ್ಮ ಕೃಷಿ ಸಂಬಂಧಿ ಆವಿಷ್ಕಾರಗಳನ್ನು ಪ್ರದರ್ಶಿಸಲಿದ್ದಾರೆ.
ರಾಜ್ಯ ಮಟ್ಟದಲ್ಲಿ ನಡೆಯುವ ಈ ಕೃಷಿ ವಿಜ್ಞಾನ ಮೇಳವು ಸೃಜನಾತ್ಮಕವಾದ ಆವಿಷ್ಕಾರಗಳು, ಮಾದರಿಗಳು, ಯೋಜನಾ ವರದಿಗಳನ್ನು ಕೃಷಿಕರು, ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಸರಕಾರದ ನೀತಿ ಸಂಯೋಜಕರು, ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸುವ ವೇದಿಕೆಯಾಗಿದ್ದು, ಉತ್ತಮವಾದ ಆವಿಷ್ಕಾರಗಳು, ಮಾದರಿಗಳನ್ನು ವಿವಿಧ ಸಂಸ್ಥೆಗಳು, ಕಂಪೆನಿಗಳು ಗುರುತಿಸಿ ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುವ ಹಾಗೂ ವಾಣಿಜ್ಯ ಉತ್ಪನ್ನವಾಗಿ ಮಾರುಕಟ್ಟೆಗೆ ಪರಿಚಯಪಡಿಸುವಂತೆಯೂ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಆವಿಷ್ಕಾರಿಗಳ ಕೃಷಿಸ್ನೇಹಿ ಯೋಚನೆ-ಯೋಜನೆಗಳನ್ನು ದೊಡ್ಡಮಟ್ಟದಲ್ಲಿ ಬೆಳೆಯಲು ಪ್ರೆರೇಪಿಸುವ ಸದುದ್ದೇಶದೊಂದಿಗೆ ಆಯೋಜನೆಗೊಂಡಿರುವ ಈ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…