ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ.
ಮಾರ್ಚ್ ತಿಂಗಳ ಕೊನೆಯ ವಾರ ಮದ್ಯಾಹ್ನ 3.00 ಗಂಟೆಗೆ ವಿದ್ಯಾರ್ಥಿನಿಯೊಬ್ಬಳ ಜೊತೆ ಕಾಲೇಜಿನ ಸುನಿಲ್ ಎಂಬಾತನು ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್, ಪ್ರಕೃತ್ ಎಂಬವರನ್ನು ಕೂಡಿಕೊಂಡು ಕಾರಿನಲ್ಲಿ ಚಾಲಕನೊಂದಿಗೆ ಜೊತೆಯಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ 4 ರಿಂದ 5 ಜನ ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ ಹಾಗೂ ಈ ವಿಚಾರವನ್ನು ಮುಂದಕ್ಕೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಈ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಪಡಿಸುವುದಾಗಿ ಬೆದರಿಸಿರುತ್ತಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆರೋಪಿಗಳನ್ನು ವಶಪಡಿಸುವಲ್ಲಿ ತಂಡಗಳು ಯಶಸ್ವಿಯಾಗಿರುತ್ತದೆ.
ಆರೋಪಿಗಳು
ಬಜತ್ತೂರು ಗ್ರಾಮದ ಗಾಣದಮೂಲೆ ಮನೆಯ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್ (19),
ಪೆರ್ನೆ ಗ್ರಾಮದ ರಾಜಶ್ರೀ ಕೃಪದ ನಾಗೇಶ್ ನಾಯ್ಕ ಅವರ ಪುತ್ರ ಪ್ರಜ್ವಲ್ (19) ,
ಪೆರ್ನೆ ಗ್ರಾಮದ ಕಡಂಬು ಮನೆ ಸದಾಶಿವ ಅವರ ಪುತ್ರ ಕಿಶನ್(19) ,
ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಪಿಲಿಗುಂಡ ಮನೆಯ ಕಾಂತಪ್ಪ ಗೌಡರ ಪುತ್ರ ಸುನಿಲ್ (19) ,
ಬರಿಮಾರು ಗ್ರಾಮದ ಬಲ್ಯ ಮನೆ ಸುಬ್ಬಣ್ಣ ಶೆಟ್ಟಿ ಅವರ ಪುತ್ರ ಪ್ರಖ್ಯಾತ್(19),
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…