ಪುತ್ತೂರು: ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆಗೆ ನಡೆಸಿ ಕಠಿಣ ಕ್ರಮ ನಡೆಸಲು ಆಗ್ರಹಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಘಟಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪುತ್ತುರು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣರವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಈ ಪ್ರಕರಣವನ್ನು ಮುಂದಿಟ್ಟು ಕೆಲವು ಕಿಡಿಗೇಡಿಗಳು ಆರೋಪಿ ಎಬಿವಿಪಿ ಕಾರ್ಯಕರ್ತರು ಎಂಬ ಅಪಪ್ರಚಾರವನ್ನು ಮಾಡುತ್ತಿರುವುದು ಕಂಡುಬಂದಿದೆ> ಈ ಪ್ರಕರಣ ಆರೋಪಿಗಳಿಗೂ ಎಬಿವಿಪಿಗೂ ಸಂಬಂಧವಿಲ್ಲ. ಹೀಗಿದ್ದರೂ ಆರೋಪಿಗಳ ಜೊತೆ ಸಂಘಟನೆಯ ಹೆಸರನ್ನು ಸೇರಿಸಿ ಅಪಪ್ರಚಾರ ನಡೆಸುವುದರಿಂದ ಸಂಘಟನೆಯ ಘನತೆಗೆ ಧಕ್ಕೆ ಬಂದಿದೆ. ಇಲಾಖೆ ಈ ಕೂಡಲೇ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಶಿವಪ್ರಸಾದ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಖಂಡಿಸುತ್ತೇವೆ ಮತ್ತು ಅತ್ಯಾಚಾರಿಗಳ ವಿರುದ್ಧ ಕಠಿನ ಶಿಕ್ಷೆಗೆ ಆಗ್ರಹಿಸುತ್ತೇವೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.