ಜಿಲ್ಲೆ

ಪುತ್ತೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಹೆಚ್ಚಿದ ಆಕ್ರೋಶ , ಸೂಕ್ತ ಕ್ರಮಕ್ಕೆ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕಾಲೇಜು ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರ ಪ್ರಕರಣ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು  ಸೂಕ್ತ ಕ್ರಮಕ್ಕೆ ಒತ್ತಾಯ ಹೆಚ್ಚಾಗಿದೆ. ಬಹುತೇಕ ಎಲ್ಲಾ ಸಂಘಟನೆಗಳೂ ಘಟನೆಯನ್ನು ಖಂಡಿಸಿದ್ದು ತಕ್ಷಣ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿ ಸೂಕ್ತ ಕಾನೂನು ಕ್ರಮವಾಗಬೇಕು, ಮುಂದೆ ಇಂತಹ ಘಟನೆ ನಡೆಯದಂತೆ ಆಗಬೇಕು ಎಂಬ ಒತ್ತಾಯ ಕೇಳಿಬಂದಿದೆ.

Advertisement

ಭಜರಂಗದಳ ಆಗ್ರಹ:

ಪುತ್ತೂರಿನಲ್ಲಿ ನಡೆದ ಅಶ್ಲೀಲ ವೀಡಿಯೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಹಾಗೂ ಈ ಘಟನೆ ಬಗ್ಗೆ ತಕ್ಷಣ ಪೊಲೀಸ್ ಇಲಾಖೆ ಗಮನಿಸಿ ಕಾಮಾಂದಧರಿಗೆ ಉಗ್ರ ಶಿಕ್ಷೆ ವಿಧಿಸಬೇಕೆಂದು ಹಾಗೂ ಗಾಂಜಾ ಡ್ರಗ್ಸ್ ನಂತಹ ಮಾದಕ ವ್ಯಸನಗಳಿಂದ ಈ ಮಾಫಿಯಾಗಳಿಂದ ಯುವಜನತೆಯನ್ನು ರಕ್ಷಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಆಗ್ರಹಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯ:

ಪುತ್ತೂರು ನಗರದಲ್ಲಿ ಕೆಲವು ಯುವಕರು ಹುಡುಗಿಯೊಬ್ಬಳನ್ನು ಅಪಹರಿಸಿ, ಮತ್ತು ಬರಿಸಿ, ಅವಳ ಮೇಲೆ ಅತ್ಯಾಚಾರ ಎಸಗಿ, ಅದನ್ನು ವೀಡಿಯೋ ಮಾಡಿರುವರು ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಕುಕೃತ್ಯ ಅತ್ಯಂತ ಭೀಕರವಾಗಿದ್ದು ಇಂದಿನ ಯುವಕರ ಮಾನಸಿಕ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಸಂಘಪರಿವಾರದ ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದೂ ವರದಿಯಾಗಿದೆ. ಭಾರತ ಕಮ್ಯುನಿಸ್ಟ್ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪೋಲೀಸ್ ಇಲಾಖೆ ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ತಪ್ಪಿತಸ್ತರಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸರಕಾರವನ್ನು ಒತ್ತಾಯಿಸುತ್ತದೆ ಎಂದು ಪ್ರಕಟಣೆ ನೀಡಿದೆ.

ಯುವಕಾಂಗ್ರೆಸ್ ಖಂಡನೆ:

ಪುತ್ತೂರು ಕಾಲೇಜ್ ನ ಹುಡುಗಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಘಟನೆ ಖಂಡನೀಯ ಎಂದು ಯುವಕಾಂಗ್ರೆಸ್ ಪ್ರಕಟಣೆ  ನೀಡಿದೆ. ಘಟನೆ ಖಂಡಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ   ಜು.4 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ  ಮಾಡುವ ಸುದ್ದಿ ವೈರಲ್ ಆಗಿದೆ.

 

ಎಸ್ ಡಿ ಪಿ ಐ ಖಂಡನೆ :

ಪುತ್ತೂರಿನ ಕಾಲೇಜಿನ ವಿದ್ಯಾರ್ಥಿನಿಯನ್ನು ಮಾದಕ ವ್ಯಸನ ನೀಡಿ ಅತ್ಯಾಚಾರವೆಸಗಿದ  ಕೃತ್ಯವನ್ನು ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಖಂಡಿಸಿದ್ದಾರೆ. ಬುದ್ದಿವಂತರ ಜಿಲ್ಲೆ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯು ಜನ  ತಲೆತಗ್ಗಿಸುವಂತಾಗಿದೆ‌. ಪ್ರಕರಣ ಬೆಳಕಿಗೆ ಬಂದಾಗಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತಕ್ಷಣವೇ ಐದು ಮಂದಿ ಆರೋಪಿ ವಿದ್ಯಾರ್ಥಿಗಳನ್ನು ಬಂದಿಸಿದ ದ.ಕ ಜಿಲ್ಲಾ ಪೋಲೀಸ್ ರ ಕಾರ್ಯವನ್ನು ಎಸ್ಡಿಪಿಐ ಜಿಲ್ಲಾ ಸಮಿತಿಯು ಪ್ರಶಂಸಿಸುತ್ತದೆ. ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕೂಲಂಕುಷ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಂಡು ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕಾಗಿ ಎಸ್ಡಿಪಿಐ ಜಿಲ್ಲಾ ಪ್ರ ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 

ಸಾಮಾಜಿಕ ಜಾಲತಾಣದಲ್ಲೂ ಖಂಡನೆ :

ಪುತ್ತೂರಿನ ಈ ಘಟನೆಗೆ ರಾಜ್ಯದ ಎಲ್ಲಾ ಕಡೆಯಲ್ಲೂ ಖಂಡನೆ, ಆಕ್ರೋಶ ವ್ಯಕ್ತವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ. ಪೇಸ್ ಬುಕ್, ವ್ಯಾಟ್ಸಪ್,  ಹಲೋ ಸೇರಿಂತೆ ವಿವಿಧ ತಾಣಗಳಲ್ಲಿ ಇಡೀ ದಿನ ಘಟನೆಗೆ ಖಂಡನೆ ವ್ಯಕ್ತವಾಗಿದೆ.

 

ಪೊಲೀಸ್ ಇಲಾಖೆಯಿಂದ ಎಚ್ಚರಿಕೆ :

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಹುಡುಗಿಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಪ್ರಸಾರವಾಗುತ್ತಿದ್ದು , ಇಂತಹ ಮಾಹಿತಿಗಳನ್ನು ಪ್ರಸಾರಪಡಿಸುವುದು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಅಂತಹ ಸುದ್ದಿಗಳನ್ನು ಪ್ರಚಾರಪಡಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ  ಎಚ್ಚರಿಸಿದ್ದಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

6 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

22 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

22 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

22 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

22 hours ago