Advertisement
ಸುದ್ದಿಗಳು

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರದ ಉದ್ಘಾಟನೆ

Share

ಪುತ್ತೂರು: ಇಂದಿನ ಯುವಜನತೆ ಉದ್ಯೋಗವನ್ನು ಅರಸಿ ಪಟ್ಟಣಗಳಿಗೆ ಹೋಗುವ ಬದಲು ಗ್ರಾಮೀಣ ಭಾಗದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗದಾತರಾಗುವತ್ತ ಮನ ಮಾಡಬೇಕು. ಇದರ ಮೂಲಕವಾಗಿ ಪ್ರಧಾನ ಮಂತ್ರಿಯವರ ಮೇಕ್ ಇನ್ ಇಂಡಿಯಾ ಹಾಗೂ ವೋಕಲ್ ಫಾರ್ ಲೋಕಲ್ ಪರಿಕಲ್ಪನೆಯು ಯಶಸ್ವಿಯಾಗುವಂತೆ ಮಾಡಬೇಕು ಎಂದು ಪುತ್ತೂರು ವಿದಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಸಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇಂಜಿನಿಯರಿಂಗ್‍ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾರಂಭಿಸಲಾದ ಸಿಇಟಿ ಸಲಹಾ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತಾಡಿದರು. ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಮಾನಗಳು, ಗೊಂದಲಗಳು ಇರುವುದು ಸಹಜ ಇದರ ನಿವಾರಣೆಗೆ ಇಂತಹ ಸಲಹಾ ಕೇಂದ್ರಗಳು ಸಹಕಾರಿಯಾಗುತ್ತವೆ. ಇದರ ಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪಡೆದುಕೊಳ್ಳುವಂತಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸತೀಶ್ ರಾವ್.ಪಿ ಮಾತನಾಡಿ ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಂತಹ ಸಹಾಯ ಕೇಂದ್ರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಪ್ರತಿವರ್ಷವೂ ಅನೇಕ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಪ್ರಕ್ರಿಯೆಯ ಮೊದಲೇ ವಿದ್ಯಾರ್ಥಿಗಳ ಅನುಮಾನಗಳನ್ನು ಪರಿಹರಿಸುವುದರ ಮೂಲಕವಾಗಿ ವಿದ್ಯಾರ್ಥಿಗಳನ್ನು ತಾಂತ್ರಿಕ ಶಿಕ್ಷಣದತ್ತ ಪ್ರೇರೇಪಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಸೇರುವುದಕ್ಕೆ ಬೇಕಾದ ಮಾರ್ಗದರ್ಶನ, ಹೊಂದಿಸಬೇಕಾದ ದಾಖಲೆಗಳು, ಸರ್ಕಾರದಿಂದ ಸಿಗುವ ವಿವಿಧ ವಿದ್ಯಾರ್ಥಿವೇತನಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ ಹಾಗೂ ಸಿಇಟಿ ಪ್ರಕ್ರಿಯೆ ಮುಗಿಯುವವರೆಗೂ ನಿರಂತರವಾಗಿ ಸಹಾಯ ಕೇಂದ್ರವು ಕೆಲಸ ಮಾಡುತ್ತದೆ ಎಂದರು.
‌

ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ, ನಿರ್ದೇಶಕರಾದ ಸುಬ್ರಮಣ್ಯ ಭಟ್.ಟಿ.ಎಸ್, ರವಿಕೃಷ್ಣ.ಡಿ.ಕಲ್ಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸ್ವಾಗತಿಸಿ ಪ್ರಾಸ್ತಾವನೆಗೈದರು. ಮೂಲವಿಜ್ಞಾನ ವಿಭಾಗದ ಡಾ.ಪ್ರಸಾದ್.ಎನ್.ಬಾಪಟ್ ವಂದಿಸಿದರು. ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್ ದೈಲಾ ಕಾರ್ಯಕ್ರಮ ನಿರ್ವಹಿಸಿದರು.

ಪ್ರಾಂಶುಪಾಲರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

23 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

23 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago