ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.
ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.
ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…