Advertisement
ಸುದ್ದಿಗಳು

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

Share

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಯು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ).

ಕರೀಂ ಖಾನ್

ಆರೋಪಿ ಕರೀಂ ಖಾನ್ ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೇಕ್ ಕೊಗ್ಗು ಸಾಹೇಬ್ ಅವರ ಮನೆಗೆ ಕಳ್ಳತನದ ಉದ್ದೇಶದಿಂದ  ಮನೆಯ ಗೋಡೆ ಮತ್ತು ಹಂಚಿನ ನಡುವೆ ನುಸುಳಿ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ ಹೀಗಾಗಿ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ.ಆರೋಪಿ ಕರೀಂ ಖಾನ್ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮನಸ್ತಾಪವನ್ನೂ ಹೊಂದಿದ್ದ ಎಂದೂ ಪೊಲೀಸರಲ್ಲಿ  ಬಾಯಿಬಿಟ್ಟಿದ್ದಾನೆ.

ಕಳ್ಳತನದ ವೇಳೆ ಮನೆಯವರಿಗೆ ಎಚ್ಚರವಾದ್ದು ತಿಳಿದು  ಅಡುಗೆ ಕೋಣೆಯಲ್ಲಿದ್ದ ಕೊಕ್ಕೆ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಎಂಬವರುಗಳು ಹತ್ಯೆ ನಡೆಸಿದ್ದು, ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದ. ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ದಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ನಡೆದ ಈ ಪ್ರಕರಣದ ಆರೋಪಿ ಬಂಧಿಸುವಲ್ಲಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago