ಪುತ್ತೂರು: ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಒಂದು ತಿಂಗಳ ಕಾಲ ಸ್ವಚ್ಛ ಮೇವ ಜಯತೇ ಆಂದೋಲನ ತಾಲೂಕಿನಾದ್ಯಂತ ನಡೆಯಲಿದ್ದು ಮಂಗಳವಾರ ಪುತ್ತೂರಿನ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಶಾಸಕ ಸಂಜೀವ ಮಠಂದೂರು ಅವರು ಬಿಳಿ ನಿಶಾನೆ ಹಾರಿಸುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ಆಂದೋಲನವು ವಾಹನದ ಮೂಲಕ ಎಲ್ಲಾ ಗ್ರಾಮಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಿದೆ. ಜಿ.ಪಂ ಸದಸ್ಯರಾದ ಪ್ರಮೀಳಾ ಜನಾರ್ದನ, ಪಿ.ಪಿ ವಗೀಸ್, ಸರ್ವೋತ್ತಮ ಗೌಡ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಯೋಜನಾಧಿಕಾರಿ ಅರವಿಂದ ಭಂಡಾರಿ, ಶಿವಪ್ರಕಾಶ್ ಅಡ್ಲಪಂಗಾಯ, ನ್ಯಾಯವಾದಿ ಮಹಾಲಬ ಗೌಡ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕೃಷ್ಣಕಮಾರ ರೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel