ಪುತ್ತೂರು: ದ.ಕ.ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ “ವಿವೇಕ ಕ್ರೀಡಾ ಸಂಭ್ರಮ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಅ.17 ರಂದು ಉದ್ಘಾಟನೆಗೊಂಡಿತು.
ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಧ್ವಜಾರೋಹಣ ನೆರವೇರಿಸಿದರು. ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಕ್ರೀಡಾಜ್ಯೋತಿ ಬೆಳಗಿಸಿದರು.
ವೇದಿಕೆಯಲ್ಲಿ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ನಗರ ಸಭಾ ಸದಸ್ಯೆ ಯಶೋಧ ಹರೀಶ್, ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್, ಅಕ್ಷರ ದಾಸೋಹ ಸಹಾಯ ನಿರ್ದೇಶಕ ಸುರೇಶ್ ಕುಮಾರ್, ವಿ.ಆಂ.ಮಾ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ ಶಿವಪ್ರಕಾಶ್, ವಿ.ಆಂ.ಮಾ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆರ್.ಸಿ.ನಾರಾಯಣ, ಕೀಡಾಕೂಟದ ಸ್ವಾಗತ ಸಮಿತಿ ಅಧ್ಯಕ್ಷ ವಿಶ್ವಾಸ್ ಶೆಣೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿ.ಆಂ.ಮಾ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಸ್ವಾಗತಿಸಿದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…