ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕ 19 ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ|ನರೇಂದ್ರ ರೈ ದೇರ್ಲ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆ ತಿಳಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕ 19 ನೇ ಸಾಹಿತ್ಯ ಸಮ್ಮೇಳನವು ಡಿ.7 ರಂದು ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ|ನರೇಂದ್ರ ರೈ ದೇರ್ಲ ಅವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪದ್ರೀಪ ಕುಮಾರ ಕಲ್ಕೂರ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಎ. ಕೆ. ಜಯರಾಮ ರೈ, ಗೌರವಾಧ್ಯಕ್ಷ ದಂಬೆಕಾನ ಸದಾಶಿವ ರೈ, ಸಮ್ಮೇಳನ ಸಂಚಾಲಕ ಬಿ. ರಘುನಾಥ ರೈ ಕೆಯ್ಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel