ಪುತ್ತೂರು: ಪುತ್ತೂರು ತಾಲೂಕಿನ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದ ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕನಾಗಿದ್ದ ಪುತ್ತೂರು ತಾಲೂಕು ಒಳಮೊಗ್ರು ನಿವಾಸಿಯಾದ ನಝೀರ್ (40 ವರ್ಷ) ಎಂಬಾತನು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಆಧಾರದಲ್ಲಿ ಆರೋಪಿ ಶಿಕ್ಷಕ ನಝೀರ್ ನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…