ಪುತ್ತೂರು: ಪುತ್ತೂರು ಬಿಜೆಪಿ ಮಂಡಲ ವತಿಯಿಂದ, ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಂಧಿ ಸಂಕಲ್ಪ ಯಾತ್ರೆಯ ಸಮಾರೋಪ
ಕಾರ್ಯಕ್ರಮ ಬುಧವಾರ ಪುತ್ತೂರಿನ ಕಲ್ಲೇಗ ಕಲ್ಕುಡ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ನೆರವೇರಿಸಿದರು. ಮರೀಲು ಕ್ಯಾಂಪ್ಕೋ ಚಾಕಲೇಟ್ ಪ್ಯಾಕ್ಟರಿ ಬಳಿಯಿಂದ ಕಲ್ಲೇಗ ಕಲ್ಕುಡ ದೈವಸ್ಥಾನದ ತನಕ ಪಾದಯಾತ್ರೆ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂದರ್ ಜೈನ್, ರಾಧಾಕೃಷ್ಣ ಆಳ್ವ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel