ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ನಟರಾಜ್ ಆರ್. ಹೇಳಿದರು.
ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಫೆ.21ರಂದು ಜರುಗಿದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಉಚ್ಛ ನ್ಯಾಯಾಲಯದ ನ್ಯಾಯವಾದಿಗಳಾದ ವಿವೇಕ್ ಸುಬ್ಬ ರೆಡ್ಡಿ ಮಾತನಾಡಿ, ವಕೀಲ ವೃತ್ತಿಗೆ ಕಾನೂನಿನ ಭಾಷೆ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮ ಅಗತ್ಯವಾಗಿದೆ. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ವಕೀಲ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು. ಮತ್ತೋರ್ವ ಅತಿಥಿಯಾದ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ. ವಿ. ಮಾತನಾಡಿ, ವಕೀಲ ವೃತ್ತಿಯು ಈ ಕಾಲಘಟ್ಟದಲ್ಲಿ ಒಂದು ಉದ್ಯಮವಾಗಿ ಬದಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು, ಮುಂದಿನ ವೃತ್ತಿಜೀವನದಲ್ಲಿ ಕೇವಲ ಹಣವನ್ನು ಸಂಪಾದಿಸುವುದರ ಕಡೆಗೆ ಗಮನಹರಿಸಬಾರದು. ಒಬ್ಬ ಒಳ್ಳೆಯ ವಕೀಲನಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಗಳಾದ ಕೃಷ್ಣ ಕುಮಾರ್ ಶೆಟ್ಟಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘವು ತನ್ನ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ವಿಚಾರಗಳಿಗೆ ಮಹತ್ವವನ್ನು ನೀಡುತ್ತಿದೆ. ವಿವೇಕಾನಂದ ಕಾನೂನು ಕಾಲೇಜು ಈ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ವಂದಿಸಿದರು.
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…