ಪುತ್ತೂರು:ಕರಾವಳಿಯಲ್ಲಿ ಆಹಾರ ಬೆಳೆಯತ್ತ ಗಮನಹರಿಸಬೇಕಾದ ಅಗತ್ಯವಿದೆ. ತರಕಾರಿ ಹಾಗೂ ಹಣ್ಣುಗಳ ಸ್ವಾವಲಂಬನೆ ಬೇಕಿದೆ. ಈ ನೆಲೆಯಲ್ಲಿ ಕೃಷಿಕರನ್ನು ಜಾಗೃತಿಗೊಳಿಸುವ ಕಾರ್ಯಬೇಕಿದೆ. ಇದರ ಜೊತೆಗೆ ಮಾರುಕಟ್ಟೆಯ ಕಡೆಗೂ ಗಮನಹರಿಸಬೇಕಾದ ಅಗತ್ಯವಿದೆ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಹೇಳಿದರು.
ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐ ಐ ಎಚ್ ಆರ್, ತೋಟಗಾರಿಕಾ ಇಲಾಖೆ, ನವತೇಜಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದಲ್ಲಿ ಕರಾವಳಿಯಲ್ಲಿ ಬೆಳೆಯುವ ವಿವಿಧ ತರಕಾರಿ ಬೆಳೆ ಹಾಗೂ ಹೂವು ಬೆಳೆಯ ಪ್ರಾತ್ಯಕ್ಷಿಕೆಗೆ ತರಕಾರಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅತಿಥಿಯಾಗಿದ್ದ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ, ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ ಹಿಂದೆ ಗ್ರಾಮಸ್ವಾವಲಂಬೆಯಲ್ಲಿ ಇತ್ತು. ತರಕಾರಿಯಿಂದ ತೊಡಗಿ ಭತ್ತದವರೆಗೆ ಎಲ್ಲವನ್ನೂ ಕೃಷಿಕರು ಬೆಳೆಯುತ್ತಿದ್ದರು, ಇದರಿಂದ ಆರೋಗ್ಯವೂ ಉತ್ತಮವಾಗಿತ್ತು.ಈಗ ಕಾಲ ಬದಲಾಗಿದೆ, ಈಗ ಆರೋಗ್ಯವೂ ಹದಗೆಡುತ್ತಿರುವುದಕ್ಕೆ ಸ್ವಾವಲಂಬನೆಯಿಂದ ಹೊರಬಂದಿರುವುದೇ ಕಾರಣವಾಗಿದೆ. ಈ ಸಂದರ್ಭದಲ್ಲಿ ಮತ್ತೆ ತರಕಾರಿ,ಹಣ್ಣು ಬೆಳೆಯುವ ಮೂಲಕ ಸ್ವಾವಲಂಬನೆಯತ್ತ, ಆರೋಗ್ಯವಂತ ಬದುಕಿನತ್ತ ಸಾಗಬೇಕಿದೆ ಎಂದರು.
ಪ್ರಸ್ತಾವನೆಗೈದ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ, ಮೇ ತಿಂಗಳ ಅಂತ್ಯದಲ್ಲಿ ನಡೆಯುವ ತೋಟಗಾರಿಕಾ ಬೆಳೆಗಳ ಮೇಳಕ್ಕೆ ಸಮಸ್ತ ಜನರ ಹಾಗೂ ವಿಶೇಷವಾಗಿ ಕೃಷಿಕರ ಸಹಕಾರ ಅಗತ್ಯವಿದೆ ಎಂದರು. ಪ್ರಾತ್ಯಕ್ಷಿಕೆಯಲ್ಲಿ ಸುಮಾರು30 ಬಗೆಯ ತರಕಾರಿ ಬೆಳೆ , ಹೂವು ಕೃಷಿಯ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.
ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ವಂದಿಸಿದರು. ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…