ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.
ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…